ಸೂಲಗಿತ್ತಿ ನರಸಮ್ಮ

ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಸಾಮಾಜಿಕ ಕಾರ್ಯಕರ್ತೆ. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ ಹೆರಿಗೆ ತಜ್ಞೆಯಂತೆ 15,000 ಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ. ಅವರ ಈ ಕೆಲಸವನ್ನು ಪರಿಗಣಿಸಿ ಭಾರತ ಸರ್ಕಾರವು 2018ರಲ್ಲಿ ಪದ್ಮಶ್ರೀ ಹಾಗೂ 2013ರಲ್ಲಿ ವಯೋಶ್ರೇಷ್ಟ ಸಮ್ಮಾನ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಇವರು ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಅನ್ನು ಪಡೆದಿದ್ದಾರೆ. ನರಸಮ್ಮನವರು ತುಮಕೂರು ಜಿಲ್ಲೆಯ ಪಾವಗಡ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಅಂಬರೀಶ್ ಜೀವನ ಪಯಣ

ಅಂಬರೀಶ್ (ಮಳವಳ್ಳಿ ಹುಚ್ಚೇಗೌಡ ಅಮರನಾಥ್) (29 ಮೇ 1952 – 24 ನವೆಂಬರ್ 2018) ಭಾರತೀಯ ಚಲನಚಿತ್ರ ನಟ ಮತ್ತು ಕರ್ನಾಟಕ ರಾಜ್ಯದ ಒಬ್ಬ ರಾಜಕಾರಣಿಯಾಗಿದ್ದರು. ಪುಟ್ಟಣ್ಣ ಕಣಗಾಲ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಾಗರಹಾವು (1972) ನಲ್ಲಿ ಚೊಚ್ಚಲ ನಟನೆಯ ನಂತರ, ಅವರ ನಟನಾ ವೃತ್ತಿಯು ಕನ್ನಡ ಚಿತ್ರಗಳಲ್ಲಿ ಖಳ ನಟ ಮತ್ತು ಪೋಷಕ ಪಾತ್ರಗಳನ್ನು ಚಿತ್ರಿಸುವ ಒಂದು ಸಂಕ್ಷಿಪ್ತ ಹಂತದೊಂದಿಗೆ ಪ್ರಾರಂಭವಾಯಿತು. ವಾಣಿಜ್ಯಿಕವಾಗಿ ಯಶಸ್ಸು ಗಳಿಸಿದ ಅನೇಕ ಚಿತ್ರಗಳಲ್ಲಿ ಸ್ವತಃ ಪ್ರಮುಖ ಖಳನಟನಾಗಿ ಸ್ಥಾಪನೆಗೊಂಡ ನಂತರ, ಅನೇಕ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಸರ್ದಾರ್ ವಲ್ಲಭಭಾಯ್ ಪಟೇಲ್

ಸರ್ದಾರ್ ವಲ್ಲಭಭಾಯ್ ಪಟೇಲ್ (ಅಕ್ಟೋಬರ್ ೩೧, ೧೮೭೫ – ಡಿಸೆಂಬರ್ ೧೫, ೧೯೫೦) ಉಕ್ಕಿನ ಮನುಷ್ಯ – ಭಾರತದ ಪ್ರಮುಖ ಗಣ್ಯರಲ್ಲಿ ಒಬ್ಬರು, ರಾಜಕೀಯ ಮುತ್ಸದ್ಧಿ. ಇವರು ಗಾಂಧೀಜಿಯವರ ಕೆಳಗೆ ಭಾರತೀಯ ರಾಷ್ಟೀಯ ಕಾಂಗ್ರೆಸ್‌ನ ಮುಖ್ಯ ನಿರ್ವಾಹಕರು ಇವರೇ ಆಗಿದ್ದರು. ಇವರ ಪ್ರಯತ್ನಗಳಿಂದಲೇ ೧೯೩೭ರ ಮತದಾನದಲ್ಲಿ ಕಾಂಗ್ರೆಸ್ ೧೦೦% ಜಯವನ್ನು ಸಾಧಿಸಿತು. ವಸ್ತುಶಃ ಸರ್ದಾರ್ ಪಟೇಲ್‌ರವರೇ ಕಾಂಗ್ರೆಸ್ ಸದಸ್ಯರಿಂದ ಪ್ರಧಾನಿ ಹುದ್ದೆಗೆ ಬೆಂಬಲಿಸಲ್ಪಟ್ಟಿದ್ದರು. ಆದರೆ ಗಾಂಧೀಜಿಯವರ ಒತ್ತಾಯದ ಮೇಲೆ ಇವರು ಪ್ರಧಾನಿ ಹುದ್ದೆಗೆ ಹಿಂದಕ್ಕೆ ಸರಿದು ಜವಾಹರ್ ಲಾಲ್ ನೆಹರುರವರಿಗೆ ದಾರಿ ಮಾಡಿಕೊಟ್ಟರು. ಬಾಲ್ಯ: ವಲ್ಲಭಭಾಯ್ ಝವೇರಭಾಯ್ ಪಟೇಲ್ ಹುಟ್ಟಿದ್ದು ಗುಜರಾತಿನ ನಡಿಯಾದ್ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಸುಭಾಷ್‌ ಚಂದ್ರ ಬೋಸ್‌ರ ಆಜಾದ್ ಹಿಂದ್ ಫೌಜ್

ನೇತಾಜಿ ಸುಭಾಷ್ ಚಂದ್ರ ಬೋಸ್ ಹೆಸರೇ ರೋಮಾಂಚನಕಾರಿ. ಭಾರತೀಯ ಯುವಜನಾಂಗದ ಆಸೆ ಆಕಾಂಕ್ಷೆಗಳ ಮೂರ್ತಿವೆತ್ತ ರೂಪ. ಭಾರತಕ್ಕೆ ಪೂರ್ಣ ಸ್ವಾತಂತ್ಯ್ರ ತಂದುಡಬೇಕೆಂಬ ದೃಢ ನಿಶ್ಚಯ. ದೇಶದೊಳಗಡೆಯಷ್ಟೆ ಸಾಲದು ಹೊರದೇಶಗಳಲ್ಲೂ ಸಂಚರಿಸಿ ಭಾರತ ಭಕ್ತರ ಶಕ್ತಿ ಸಂಚಯಿಸಿ ಹೋರಾಡಲು ಚಿಂತಿಸಿದರು. ಯುದ್ಧಕಾಲದಲ್ಲಿ ಜರ್ಮನಿಯ ಪರವಾಗಿ ರಷ್ಯಾ ಇರುವುದರಿಂದ ಇಂಗ್ಲೆಂಡಿನ ಕೋಪಕ್ಕೊಳಗಾಗಿದ್ದು, ಶತ್ರುವಿನ ಶತ್ರು ನಮ್ಮ ಮಿತ್ರ ಎಂಬ ರಣನೀತಿಗನುಸಾರ ಅವರನ್ನು ಬಳಸಿಕೊಳ್ಳಲು ರಷ್ಯಾಕ್ಕೆ ಹಾರಲು ನಿರ್ಧಾರ. ಜಿಯಾಉದ್ದೀನ್ ಹೆಸರಲ್ಲಿ ಗಡ್ಡಾಮೀಸೆ ಬೆಳೆಸಿ ವೇಷ ಮರೆಸಿ ಪೇಷಾವರ್ ಮಾರ್ಗವಾಗಿ ಮಾರ್ಗದಲ್ಲಿ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ವಿನಾಯಕ ಕೃಷ್ಣ ಗೋಕಾಕ

ಡಾ||ವಿನಾಯಕ ಕೃಷ್ಣ ಗೋಕಾಕ ಅವರು ಕನ್ನಡ ಸಾಹಿತ್ಯದ ಕ್ಷೇತ್ರದಲ್ಲಿ ಎತ್ತರದ ಲೇಖಕ. ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ [೧] ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು. ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು. ಜನನ ವಿನಾಯಕ ಕೃಷ್ಣರಾವ್ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ತ್ರಿಪದಿ ಕವಿ ಸರ್ವಜ್ಞ

 ‘ಸರ್ವಜ್ಞ’ ಎಂಬುದು ಒಬ್ಬ ವ್ಯಕ್ತಿಯ ಹೆಸರಲ್ಲ; ಅದೊಂದು ಕಾವ್ಯ ಪದ್ಧತಿಗೆ ಇಟ್ಟ ಹೆಸರು. ಎಂದರೆ  ಸರ್ವಜ್ಞನವೆಂದು ನಾವು ಒಪ್ಪಿಕೊಂಡಿರುವ ಈ ತ್ರಿಪದಿಗಳಲ್ಲಿ ಎಷ್ಟನ್ನೋ ವಾಸ್ತವವಾಗಿ ರಚಿಸಿದ ಕವಿಯೊಬ್ಬ ಈ ಪದ್ಧತಿಯ ಮೂಲದಲ್ಲಿ ಇದ್ದಿರಲೆ ಇಲ್ಲವೆಂದು ಈ ಮಾತಿನ ಅರ್ಥವಲ್ಲ. ಖಂಡಿತ ಇದನ್ನು ಬರೆದ ವ್ಯಕ್ತಿಯೊಬ್ಬ ಇದ್ದಿರಬೇಕು. ಅವನ ಹೆಸರೇನೋ ತಿಳಿಯದು. ‘ಸರ್ವಜ್ಞ’ ಎಂಬುದೇ ಈ ತ್ರಿಪದಿಗಳಲ್ಲಿ ಎಷ್ಟನ್ನೊ ಬರೆದ ಕವಿಯ ಹೆಸರಿದ್ದಿರಬೇಕು- ‘ಪ್ರಭು’ ‘ಪ್ರಭುದೇವ’ ಎಂಬ ಹೆಸರಿನಂತೆ, ಸರ್ವಜ್ಞ ಎಂಬುದೂ ಒಬ್ಬ ವ್ಯಕ್ತಿಯ ಹೆಸರಾಗಿದ್ದಿರಬೇಕು ಎನ್ನುತ್ತಾರೆ ಕೆಲವರು. […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಸಂತ ಶಿಶುನಾಳ ಶರೀಫರು

ಸಂತ ಶಿಶುನಾಳ ಶರೀಫರ ಅವತಾರ ಸ್ಥಾನ ಶಿಶುನಾಳ. ಪುಣ್ಯದ ಪುಂಜವೇ ಮೈತಳೆದಂತಿದ್ದ ಶರೀಫರಿಗೆ ಹಾಡು, ಭಜನೆ, ಪುರಾಣ, ತತ್ವಪದ ರಚನೆಯಲ್ಲಿ ವಿಶೇಷ ಆಸಕ್ತಿ. ಶರೀಫರ ಅಭಿರುಚಿಗೆ ತಕ್ಕಂತೆ ತಂದೆ ಇಮಾಮ್ ಸಾಹೇಬರು ಮಾರ್ಗದರ್ಶನ ನೀಡುತ್ತಿದ್ದರು. ಶಿಶುನಾಳ ಶರೀಫರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಕ್ರಿ.ಶ. 1819 ಮಾರ್ಚ 7 ರಂದು ಜನಿಸಿದರು. ಇವರ ತಂದೆ ದೇವಕಾರ ಮನೆತನದ ಇಮಾಮ ಹಜರತ ಸಾಹೇಬರು ಹಾಗು ತಾಯಿ ಹಜ್ಜೂಮಾ. ಇವರ ಪೂರ್ಣ ಹೆಸರು ಮಹಮ್ಮದ ಶರೀಫ. ಮುಲ್ಕಿ ಪರೀಕ್ಷೆ ಪಾಸು ಮಾಡಿದ ಬಳಿಕ ಶರೀಫರು ಕೆಲ ಕಾಲ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ರಾಷ್ಟ್ರಕವಿ ಗೋವಿಂದ ಪೈ

 ‘ತಾಯಬಾರ ಮೊಗವತೋರ ಕನ್ನಡಿಗರ ಮಾತೆಯೆ…’ ಈ ಪದ್ಯವನ್ನು ಯಾರು ತಾನೆ ಕೇಳಿಲ್ಲ. ಈ ಪದ್ಯದ  ಅರ್ಥವಂತಿಕೆಯ ಸೆಳೆತಕ್ಕೊಳಗಾಗಿ ಚಲನಚಿತ್ರ ಒಂದರಲ್ಲೂ ಅಳವಡಿಸಿಕೊಂಡು ಕನ್ನಡಿಗರೆಲ್ಲ ಹಾಡಿ ಸಂತೋಷಿಸಿದರು. ಈ ಗೀತೆ ಬರೆದ ಕವಿಯೇ ಮಂಜೇಶ್ವರ ಗೋವಿಂದ ಪೈಗಳು.  ಬಾಲ್ಯ ಮತ್ತು ವ್ಯಾಸಂಗ ಗೋವಿಂದ ಪೈಗಳು ಮೂಲತಃ ಮಂಗಳೂರಿನವರು. ತಂದೆ ಮಂಗಳೂರು ತಿಮ್ಮಪ್ಪ ಪೈಗಳು ಮತ್ತು ತಾಯಿ ದೇವಕಿಯಮ್ಮ. ತಾಯಿಯ ತೌರುಮನೆ ಮಂಜೇಶ್ವರ. ಅವರು ಕಾಸರಗೋಡು ತಾಲೂಕಿನ ಮಂಜೇಶ್ವರದ ಅಜ್ಜನ ಮನೆಯಲ್ಲಿ ಮಾರ್ಚ್ 23, 1882 ರಂದು ಜನಿಸಿ ದರು. ಅವರ ತಂದೆ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ (Sir M, Visvesvaraya)

ಸರ್ ಎಂ.ವಿ.(ಸೆಪ್ಟೆಂಬರ್ ೧೫, ೧೮೬೧ – ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ (Engineer’s Day) ಎಂದು ಆಚರಿಸುತ್ತಾರೆ. ಬಾಲ್ಯ: ವಿಶ್ವೇಶ್ವರಯ್ಯನವರು ಜನಿಸಿದ್ದು ಸೆಪ್ಟೆಂಬರ್ ೧೫,೧೮೬೧ ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಬ್ರಾಹ್ಮಣ ಕುಟುಂಬದಲ್ಲಿ. ವಿಶ್ವೇಶ್ವರಯ್ಯನವರ ತಂದೆ ‘ಶ್ರೀನಿವಾಸ ಶಾಸ್ತ್ರಿ’, ತಾಯಿ ‘ವೆಂಕಟಲಕ್ಷ್ಮಮ್ಮ’. ಅವರ ಪೂರ್ವಜರು ಈಗಿನ ಆಂದ್ರಪ್ರದೇಶದ ‘ಮೋಕ್ಷಗುಂಡಂ’ ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ನಾಡಪ್ರಭು ಕೆಂಪೇಗೌಡರು

ಹಿರಿಯ ಕೆಂಪೇಗೌಡರು (1510–1569) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ. ಇತಿವೃತ್ತ ವಿಜಯನಗರದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ವ್ಯಾಪ್ತಿಯು ಹಿರಿಯ ಕೆಂಪೇಗೌಡರ ಕಾಲದಲ್ಲಿ ಈಗಿನ ಬೆಂಗಳೂರಿನ ಹೊರವಲಯದಲ್ಲಿರುವ ಆವತಿಯಿಂದ ಹಿಡಿದು ಕೋಲಾರ, ಶಿವಗಂಗೆ, ಹುಲಿಕಲ್, ಕುಣಿಗಲ್, ಹುಲಿಯೂರುದುರ್ಗ, ಹುತ್ರಿದುರ್ಗ, ಮಾಗಡಿ, ರಾಮನಗರ, ಸಾವನದುರ್ಗದವರೆಗೂ ವಿಸ್ತರಿಸಿತ್ತು ಎಂಬುದಕ್ಕೆ ಹಲವಾರು ನಿದರ್ಶನಗಳಿವೆ. ಹಿರಿಯ ಕೆಂಪೇಗೌಡರ ಮಗ ಇಮ್ಮಡಿ ಕೆಂಪೇಗೌಡರ ನಂತರ ಇವರ ಸಂತತಿಯವರಿಗೆ ಮಾಗಡಿ ಕೆಂಪೇಗೌಡರೆಂಬ ಹೆಸರು ಬಂದಿದೆ. ಕೆಂಪೇಗೌಡರು ನಿರ್ಮಿಸಿದ ಕೆರೆಗಳು, ದೇವಾಲಯಗಳು, ಕೋಟೆ-ಕೊತ್ತಲಗಳು […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಮಾಸ್ತಿ ವೆಂಕಟೇಶ ಅಯ್ಯಂಗಾರ್

‘ಕನ್ನಡದ ಆಸ್ತಿ’ ಎಂದೇ ಪರಿಗಣಿತರಾದ ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ  ಬಾಲ್ಯ, ಜೀವನ, ವಿದ್ಯಾಭ್ಯಾಸ ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾ ರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು. ತಿರುಮಲ್ಲಮ್ಮ ದಂಪತಿಗಳಿಗೆ ೮-೬-೧೮೯೧ರಲ್ಲಿ ಜನಿಸಿದರು. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಮೈಸೂರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಪ್ರಥಮ ದರ್ಜೆಯಲ್ಲಿ ಎಫ್.ಎ. ಪದವಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಅಟಲ್ ಬಿಹಾರಿ ವಾಜಪೇಯಿ

ಅಟಲ್ ಬಿಹಾರಿ ವಾಜಪೇಯಿ ( 25 ಡಿಸೆಂಬರ್ 1924 – 16 ಆಗಸ್ಟ್ 2018) ಒಬ್ಬ ಭಾರತೀಯ ರಾಜಕಾರಣಿ ಆಗಿದ್ದರು, ಅವರು ಮೂರು ಬಾರಿ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು, ಮೊದಲ ಬಾರಿಗೆ 1996 ರಲ್ಲಿ 13 ದಿನಗಳ   ಅವಧಿಗೆ, 1998 ರಿಂದ 1999 ರವರೆಗೆ ಹನ್ನೊಂದು ತಿಂಗಳ ಅವಧಿ, ಮತ್ತು ನಂತರ 1999 ರಿಂದ 2004 ರವರೆಗಿನ ಪೂರ್ಣಾವಧಿಗೆ.ಲೋಕಸಭೆ, ಕೆಳಮನೆಗೆ ಹತ್ತು ಬಾರಿ ಮತ್ತು ಮೇಲ್ಮನೆಗೆ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾದ ಅವರು ನಾಲ್ಕು ದಶಕಗಳ ಕಾಲ ಭಾರತೀಯ ಸಂಸತ್ ಸದಸ್ಯರಾಗಿದ್ದರು. […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಸಾಲುಮರದ ತಿಮ್ಮಕ್ಕ

ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾರೆ .  ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ