ಕರ್ನಾಟಕದ ಕೆಲವು ಪ್ರಥಮಗಳು!

ಕನ್ನಡದ ಮೊದಲ ದೊರೆ – ಕದಂಬ ವಂಶದ ಮಯೂರವರ್ಮ. ಮೊದಲ ಶಿಲ್ಪ- ಬನವಾಸಿಯ ನಾಗಶಿಲ್ಪ ಮೊದಲ ಕೆರೆ – ಚಂದ್ರವಳ್ಳಿ ( ಚಿತ್ರದುರ್ಗ ) ಮೊದಲ ಶಾಸನ – ಹಲ್ಮಿದಿ ಶಾಸನ ( ಕ್ರಿ.ಶ. ೪೫೦ ) ಮೊದಲ ಕೋಟೆ – ಬಾದಾಮಿ ( ಕ್ರಿ. ಶ. ೫೪೩) ಮೊದಲ ಕನ್ನಡ ಕೃತಿ – ಕವಿರಾಜ ಮಾರ್ಗ (ಕ್ರಿ.ಶ.೯ನೇ ಶತಮಾನ- ಶ್ರೀವಿಜಯ)  ಕನ್ನಡದ ಮೊದಲ ನಾಟಕ – ಸಿಂಗರಾಯನ ಮಿತ್ರ- ವಿಂದಾಗೋವಿಂದ ಕನ್ನಡದ ಮೊದಲ ವಚನಕಾರ್ತಿ – […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಡಾ| ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ

ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ ದೇಶದ ಗಮನ ಸೆಳೆಯಿತು. ಈ ಗೌರವ ಪಡೆದವರು ಡಾ| ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ. ಎಲ್ಲರಿಗೂ ಅವರವರ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಅತ್ಯಗತ್ಯ ಎಂದು ಬಲವಾಗಿ ಪ್ರತಿಪಾದಿಸುವ ಅನಂತಮೂರ್ತಿ; ವಿದೇಶಗಳ ಹಲವಾರು ಭಾಷೆ ತಿಳಿದಿರುವ ನಮಗೆ ನಮ್ಮ ಅಕ್ಕಪಕ್ಕದ ನಾಡಿನ ಭಾಷೆಗಳು ಗೊತ್ತೇ ಇಲ್ಲದ್ದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಜಗತ್ತಿನ ಬೇರೆ ಬೇರೆ ಭಾಷೆಗಳ ಹಲವು ಮಹತ್ವದ ಕೃತಿಗಳು ಇಂಗ್ಲೀಷಿಗೆ ಸಮರ್ಥವಾಗಿ ಅನುವಾದಗೊಳ್ಳಲು […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ವಿನಾಯಕ ಕೃಷ್ಣ ಗೋಕಾಕ

ಡಾ||ವಿನಾಯಕ ಕೃಷ್ಣ ಗೋಕಾಕ ಅವರು ಕನ್ನಡ ಸಾಹಿತ್ಯದ ಕ್ಷೇತ್ರದಲ್ಲಿ ಎತ್ತರದ ಲೇಖಕ. ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ [೧] ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು. ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು. ಜನನ ವಿನಾಯಕ ಕೃಷ್ಣರಾವ್ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ತ್ರಿಪದಿ ಕವಿ ಸರ್ವಜ್ಞ

 ‘ಸರ್ವಜ್ಞ’ ಎಂಬುದು ಒಬ್ಬ ವ್ಯಕ್ತಿಯ ಹೆಸರಲ್ಲ; ಅದೊಂದು ಕಾವ್ಯ ಪದ್ಧತಿಗೆ ಇಟ್ಟ ಹೆಸರು. ಎಂದರೆ  ಸರ್ವಜ್ಞನವೆಂದು ನಾವು ಒಪ್ಪಿಕೊಂಡಿರುವ ಈ ತ್ರಿಪದಿಗಳಲ್ಲಿ ಎಷ್ಟನ್ನೋ ವಾಸ್ತವವಾಗಿ ರಚಿಸಿದ ಕವಿಯೊಬ್ಬ ಈ ಪದ್ಧತಿಯ ಮೂಲದಲ್ಲಿ ಇದ್ದಿರಲೆ ಇಲ್ಲವೆಂದು ಈ ಮಾತಿನ ಅರ್ಥವಲ್ಲ. ಖಂಡಿತ ಇದನ್ನು ಬರೆದ ವ್ಯಕ್ತಿಯೊಬ್ಬ ಇದ್ದಿರಬೇಕು. ಅವನ ಹೆಸರೇನೋ ತಿಳಿಯದು. ‘ಸರ್ವಜ್ಞ’ ಎಂಬುದೇ ಈ ತ್ರಿಪದಿಗಳಲ್ಲಿ ಎಷ್ಟನ್ನೊ ಬರೆದ ಕವಿಯ ಹೆಸರಿದ್ದಿರಬೇಕು- ‘ಪ್ರಭು’ ‘ಪ್ರಭುದೇವ’ ಎಂಬ ಹೆಸರಿನಂತೆ, ಸರ್ವಜ್ಞ ಎಂಬುದೂ ಒಬ್ಬ ವ್ಯಕ್ತಿಯ ಹೆಸರಾಗಿದ್ದಿರಬೇಕು ಎನ್ನುತ್ತಾರೆ ಕೆಲವರು. […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ರಾಷ್ಟ್ರಕವಿ ಗೋವಿಂದ ಪೈ

 ‘ತಾಯಬಾರ ಮೊಗವತೋರ ಕನ್ನಡಿಗರ ಮಾತೆಯೆ…’ ಈ ಪದ್ಯವನ್ನು ಯಾರು ತಾನೆ ಕೇಳಿಲ್ಲ. ಈ ಪದ್ಯದ  ಅರ್ಥವಂತಿಕೆಯ ಸೆಳೆತಕ್ಕೊಳಗಾಗಿ ಚಲನಚಿತ್ರ ಒಂದರಲ್ಲೂ ಅಳವಡಿಸಿಕೊಂಡು ಕನ್ನಡಿಗರೆಲ್ಲ ಹಾಡಿ ಸಂತೋಷಿಸಿದರು. ಈ ಗೀತೆ ಬರೆದ ಕವಿಯೇ ಮಂಜೇಶ್ವರ ಗೋವಿಂದ ಪೈಗಳು.  ಬಾಲ್ಯ ಮತ್ತು ವ್ಯಾಸಂಗ ಗೋವಿಂದ ಪೈಗಳು ಮೂಲತಃ ಮಂಗಳೂರಿನವರು. ತಂದೆ ಮಂಗಳೂರು ತಿಮ್ಮಪ್ಪ ಪೈಗಳು ಮತ್ತು ತಾಯಿ ದೇವಕಿಯಮ್ಮ. ತಾಯಿಯ ತೌರುಮನೆ ಮಂಜೇಶ್ವರ. ಅವರು ಕಾಸರಗೋಡು ತಾಲೂಕಿನ ಮಂಜೇಶ್ವರದ ಅಜ್ಜನ ಮನೆಯಲ್ಲಿ ಮಾರ್ಚ್ 23, 1882 ರಂದು ಜನಿಸಿ ದರು. ಅವರ ತಂದೆ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ: ಒಂದು ಸಾಹಸ ಕಥೆ

2008ರಲ್ಲೇ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಕ್ಕಿತ್ತಾದರೂ ತಮಿಳುನಾಡಿನ ಗಾಂಧಿ ಎಂಬುವರು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಲಿಲ್ಲ. ಇನ್ನೊಂದೆಡೆ ರಾಜ್ಯ ಸರ್ಕಾರವೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಇದಕ್ಕೆ ರಾಜ್ಯ ಮತ್ತು ಕೇಂದ್ರದಲ್ಲಿ ಬೇರೆ ಬೇರೆ ಪಕ್ಷಗಳ ಸರ್ಕಾರ ಇದ್ದುದೂ ಒಂದು ಕಾರಣವಾಗಿತ್ತು. ಪುರಾತನತೆ ಹಾಗೂ ಸಾಹಿತ್ಯ ಸಮೃದ್ಧಿ ಒಂದು ಭಾಷೆಯನ್ನು ಕ್ಲಾಸಿಕಲ್ ಎಂದು ನಿರ್ಣಯಿಸಲು ಹಿಂದೆ ಇದ್ದ ಮಾನದಂಡಗಳು ಗ್ರೀಕ್, ಲ್ಯಾಟಿಲ್, ಸಂಸ್ಕೃತ, ಪರ್ಶಿಯನ್, […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಕೋಟ ಶಿವರಾಮಕಾರಂತ

ಕಡಲ ತೀರ ಭಾರ್ಗವ, ಜ್ಞಾನಪೀಠ ಪ್ರಶಸ್ತಿ ವಿಜೇತ ಕಾದಂಬರಿಕಾರ ಕೋಟ ಶಿವರಾಮ ಕಾರಂತರು ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ 10-10-1902 ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ ಹಾಡಿದರು. ಕೋಟ ಶಿವರಾಮ ಕಾರಂತ ಎಂದರೆ ಒಂದು ಶಿಸ್ತು, ಒಂದು ವ್ಯವಸ್ಥೆ, ಒಂದು ಸಂಘಟನೆ, ಒಂದು ಸಂಯೋಜನೆ. ಒಬ್ಬ ವ್ಯಕ್ತಿ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಕುವೆಂಪು

ಕನ್ನಡ ನಾಡಿನ ಹೆಮ್ಮೆಯ ರಸಕವಿ ಕುವೆಂಪು ಅವರು. ಋಷಿಕವಿ, ರಾಷ್ಟ್ರಕವಿ ಕನ್ನಡದ ಮತ್ತೋರ್ವ ವರಕವಿಗಳಾದ ಬೇಂದ್ರೆಯವರಿಂದಲೇ ಯುಗದ ಕವಿ ಜಗದ ಕವಿ ಎಂದು ಕೀರ್ತಿತರಾದವರು. ಕನ್ನಡದ ಹಿರಿಮೆಯನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ತರಗಳಲ್ಲಿ ಎತ್ತಿ ಹಿಡಿದ ಮಹಾನ್ ಚೇತನ. ಕುವೆಂಪು ಒಬ್ಬ ದಾರ್ಶನಿಕ ಲೇಖಕರು. ವರ್ತಮಾನದ ನಿತ್ಯವನ್ನೂ, ತ್ರಿಕಾಲದ ಭವ್ಯವನ್ನೂ, ಭೂಮವನ್ನೂ, ಅಲ್ಪವನ್ನೂ ಒಂದು ಪೂರ್ಣ ದೃಷ್ಟಿಯಲ್ಲಿ ಒಳಗೊಳ್ಳಲು ಪ್ರಯತ್ನಿಸಿದ ತಪಸ್ವಿಗಳು. ಕಾಡಿನ ಕೊಳಲಿದು, ಕಾಡ ಕವಿಯು ನಾ, ನಾಡಿನ ಜನರೊಲಿದಾಲಿಪುದು; ಎಂಬ ಭಿನ್ನಹದೊಂದಿಗೆ ಕಳೆದ ಶತಮಾನದ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ದತ್ತಾತ್ರೆಯ ರಾಮಚಂದ್ರ ಬೇಂದ್ರೆ (ದ ರಾ ಬೇಂದ್ರೆ)

ಅಂಬಿಕಾತನಯದತ್ತ ಕಾವ್ಯನಾಮದಿಂದ ಕನ್ನಡಿಗರ ಮನೆಮಾತಾಗಿರುವ ದತ್ತಾತ್ರೆಯ ರಾಮಚಂದ್ರ ಬೇಂದ್ರೆಯವರು 31ನೆ ಜನವರಿ 1896ರಂದು ಧಾರವಾಡದ ಪೋತನೀಸರ ಓಣಿಯಲ್ಲಿರುವ ಗುಣಾರಿಯವರ ಮನೆಯಲ್ಲಿ ಹುಟ್ಟಿದರು.  ಅವರ ತಂದೆ ರಾಮಚಂದ್ರ ಪಂತರು.  ತಾಯಿ ಅಂಬೂ ತಾಯಿ.  ತಂದೆಯವರು ತೀರಿಕೊಂಡ ಮೇಲೆ ತನ್ನ ಇನ್ನೊಬ್ಬ ಚಿಕ್ಕಪ್ಪ ಬಂಡೋಪಂತರ ಆಶ್ರಯದಲ್ಲಿ ಬೇಂದ್ರೆಯವರ ಬಡಕುಟುಂಬ ಆಸರೆ ಪಡೆಯಿತು.  ಚಿಕ್ಕಪ್ಪನ ಆಶ್ರಯದಲ್ಲಿಯೇ ಬಿ.ಎ. ವರೆಗಿನ ಅಭ್ಯಾಸ, ಪುಣೆಯ ಫರ್ಗೂಸನ್ ಕಾಲೇಜಿನಲ್ಲಿ ನಡೆಯಿತು.   ವಿಕ್ಟೋರಿಯಾ ಹೈಸ್ಕೂಲಿನಲ್ಲಿ ಮೂರು ವರ್ಷ, ಮುಂದೆ ರಾಷ್ಟ್ರೀಯ ಶಾಲೆಯಲ್ಲಿ ಉದ್ಯೋಗ, ತಮ್ಮ 28ನೆಯ […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ

ಕಾಳಿದಾಸ

ಕಾಳಿದಾಸನು ಭಾರತ ದೇಶದ ಒಬ್ಬ ಮಹಾಕವಿ ಮತ್ತು ನಾಟಕಕಾರ. ಸಂಸ್ಕೃತ ಭಾಷೆಯಲ್ಲಿ ಕಾವ್ಯಗಳನ್ನೂ, ನಾಟಕಗಳನ್ನೂ ರಚಿಸಿದ್ದಾನೆ. “ಕವಿಕುಲಗುರು” ಎಂದು ಪ್ರಖ್ಯಾತನಾದವನು. ಇವನು ಸಂಸ್ಕೃತದ ಇನ್ನೊಬ್ಬ ಶ್ರೇಷ್ಠಕವಿ ಅಶ್ವಘೋಷನ ನಂತರ ಸಾಹಿತ್ಯವಲಯದಲ್ಲಿ ಹೆಸರು ಪಡೆದವನು. ಕಾಳಿದಾಸನ ಸ್ಥಳ/ಕಾಲದ ಪರಿಚಯ ಗಮನಿಸಿ : ಕಾಳಿದಾಸರಿಗೆ ಭಾರತದ ಶೇಕ್ಸ್ ಪಿಯರ್ ಎಂಬ ಅಭಿದಾನವೂ ಇದೆ. ಆದರೆ ಕಾಳಿದಾಸರನ್ನು ಹೀಗೆ ಕರೆಯುವ ಯಾವುದೇ ಅಗತ್ಯವಿಲ್ಲ. ಏಕೆಂದರೆ, ಶೇಕ್ಸ್ ಪಿಯರ ಕಾಲ ಏಪ್ರಿಲ್ ೨೬ ೧೫೬೪, ಹಾಗೂ ಕಾಳಿದಾಸರ ಕಾಲ ೫ ನೇ ಶತಮಾನ. ಕಾಳಿದಾಸರ ಕಾವ್ಯಗಳು ಎಷ್ಟೋ ಶತಮಾನ ಹಳೆಯದು. ಇನ್ನು ಶೇಕ್ಸ್ ಪಿಯರನ್ನು […]

ನಿಮಗೆ ಈ ಲೇಖನ ಇಷ್ಟವಾಯಿತೆ? ನಿಮ್ಮವರೊಂದಿಗೆ ಶೇರ್ ಮಾಡಿ
ಮುಂದೆ ಓದಲು ಕ್ಲಿಕ್ ಮಾಡಿ